ರಾಜಸ್ಥಾನದಲ್ಲಿ ಮತ ಎಣಿಕೆ ಪ್ರಕ್ರಿಯೆ; ಬಿಗಿ ಪೊಲೀಸ್‌ ಭದ್ರತೆ!

ರಾಜಸ್ಥಾನ : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 2026ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಸೋಮವಾರ ಬೆಳಿಗ್ಗೆ ಅತ್ಯಂತ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿ ಕೆಲವು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೂ, ವಿರೋಧ ಪಕ್ಷವಾದ ಕಾಂಗ್ರೆಸ್ ಧೀಮಂತ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ.

Advertisement

ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ರಫೀಕ್ ಖಾನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಸದ್ಯಕ್ಕೆ ಪ್ರಕಟವಾಗಿರುವ ಆರಂಭಿಕ ಫಲಿತಾಂಶಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುವುದು ನಿಜ. ಆದರೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ವಾರ್ಡ್‌ಗಳ ಎಣಿಕೆ ಕಾರ್ಯ ಇನ್ನೂ ಬಾಕಿ ಇದೆ. ಜೈಪುರದ ಆದರ್ಶ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ 2 ರಿಂದ 3 ಸ್ಥಾನಗಳನ್ನು ಹೆಚ್ಚು ಗೆಲ್ಲಲಿದೆ. ಕೃಷ್ಣಪೋಲ್ ಮತ್ತು ಹವಾಮಹಲ್ ಭಾಗಗಳಲ್ಲೂ ಇದೇ ಟ್ರೆಂಡ್ ಇದ್ದು, ಅಂತಿಮವಾಗಿ ನಮ್ಮ ಪಕ್ಷ 60ಕ್ಕೂ ಅಧಿಕ ವಾರ್ಡ್ ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಜ್ಜರ್‌ನ ಕಾಂಗ್ರೆಸ್‌ ಅಭ್ಯರ್ಥಿ ನೋರತ್ ಗುರ್ಜರ್ ಕೂಡ, ಜನಸಾಮಾನ್ಯರು ಬದಲಾವಣೆ ಬಯಸಿದ್ದು ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದ್ದಾರೆ.

Advertisement
Advertisement

ಜೋದ್‌ಪುರದ 100 ವಾರ್ಡ್‌ಗಳು 729 ಮತಗಟ್ಟೆಗಳ ಇವಿಎಂ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದಲೇ ಆರಂಭವಾಗಿದೆ. ಅಜೀ‌ರ್ ಜಿಲ್ಲಾಧಿಕಾರಿ ಲೋಕ್ ಬಂಧು ಅವರ ಪ್ರಕಾರ, ಮತ ಎಣಿಕೆಗಾಗಿ 6 ಪ್ರತ್ಯೇಕ ಹಾಲ್‌ಗಳನ್ನು ಸಿದ್ಧಪಡಿಸಲಾಗಿದ್ದು, ಮೊಬೈಲ್ ಫೋನ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 163 ಜಾರಿಗೊಳಿಸಲಾಗಿದ್ದು, ಹಾಗೂ ಯಾವುದೇ ರೀತಿಯ ವಿಜಯೋತ್ಸವದ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ.

ರಾಜಸ್ಥಾನದ ಒಟ್ಟು 309 ನಗರ ಸ್ಥಳೀಯ ಸಂಸ್ಥೆಗಳ ಎರಡೂ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೇ. 70.01 ರಷ್ಟು ದಾಖಲೆಯ ಮತದಾನವಾಗಿತ್ತು. ಇಂದಿನ ಫಲಿತಾಂಶದ ನಂತರ ಸೆಪ್ಟೆಂಬರ್ 21 ರಂದು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಹಾಗೂ ಸೆಪ್ಟೆಂಬರ್ 22 ರಂದು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page