ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.















