ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.
ʼಅನ್ನ ಸೇವೆʼ ಮೊಬೈಲ್ ಆಪ್ ಅಥವಾ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಫಲಾನುಭವಿಗಳು ಲಭ್ಯವಿರುವ ಈ ಸೌಲಭ್ಯಗಳನ್ನು ಬಳಸಿಕೊಂಡು ನಿಗದಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು ಎನ್ನಲಾಗಿದೆ.














