ಪ್ರಾಣಕ್ಕೇ ಕಂಟಕವಾಯಿತು ಸ್ನೇಹಿತರ ಜೊತೆಗಿನ ನೀರಾಟ! ಸಮುದ್ರಪಾಲಾಗಿದ್ದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯ ಶವ ಪತ್ತೆ!!

ಮಂಗಳೂರು : ಇಲ್ಲಿನ ಸೋಮೇಶ್ವರದ ಪೆರಿಬೈಲ್ ಸಮುದ್ರಕಿನಾರೆಗೆ ತೆರಳಿ ನೀರಾಟವಾಡುತ್ತಿದ್ದ ಸಂದರ್ಭ ಸಮುದ್ರಪಾಲಾಗಿದ್ದ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ಇಂದು ಪೆರಿಬೈಲ್ ಸಮುದ್ರ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Advertisement

ಉಜಿರೆ ಎಸ್ ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರದಂದು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸಂಜೆ ವೇಳೆ ಸೋಮೇಶ್ವರದ ಪೆರಿಬೈಲ್ ಬೀಚ್ ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದು, ಅಲೆಗಳ ರಭಸಕ್ಕೆ ಇಬ್ಬರೂ ನೀರು ಪಾಲಾಗಿದ್ದರು. ಆಕಾಶ್ ಈಜು ತಿಳಿದಿದ್ದ ಕಾರಣ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದನು ಎಂದು ವರದಿಗಳು ತಿಳಿಸಿವೆ.

Advertisement
Advertisement

ಸಮುದ್ರ ಪಾಲಾಗಿದ್ದ ವಿದ್ಯಾರ್ಥಿ ಶೋಭಿತ್ ಗಾಗಿ ತಡರಾತ್ರಿವರೆಗೂ ಹುಡುಕಾಟ ನಡೆಸಲಾಗಿತ್ತು.‌ ಎಸ್ ಡಿಆರ್ ಎಫ್, ಕರಾವಳಿ ಕಾವಲು ಪಡೆ, ಗೃಹ ರಕ್ಷಕ ದಳ, ಉಳ್ಳಾಲ ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page