ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾರ್ವಜನಿಕ ಜೀವನಕ್ಕೆ ಇಪ್ಪತ್ತೈದು ವರ್ಷದ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ನಡೆಯುವ ಸೇವಾಜ್ಯೋತಿ ಯಾತ್ರೆ ಮತ್ತು ಭವ್ಯ ಸಮಾರೋಪ ಸಮಾರಂಭ ಒಕ್ಟೋಬರ್ 07 ಬುಧವಾರದಂದು ಬೆಳಿಗ್ಗೆ 09.30 ಗಂಟೆಗೆ ಬಂಟ್ವಾಳದ ಬಂಟರ ಭವನದ ಆವರಣದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಯಾತ್ರೆಯೂ ಆಗಮಿಸಲಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಾತ್ರೆಯ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ, ಕರ್ನಾಟಕ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ














