25 ಸೆಂಟ್ಸ್‌ವರೆಗೆ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ! ಗ್ರಾಮೀಣ ಪ್ರದೇಶದ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ ಸ್ವಾಗತಾರ್ಹ – ಎಂ.ಎಸ್ ಮಹಮ್ಮದ್

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧಿಕೃತ ಅಧಿಸೂಚನೆಯೊಂದನ್ನು ಹರಡಿಸಿದೆ. 1961ರ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯ (Karnataka Town and Country Planning Act, 1961) ಸೆಕ್ಷನ್ 81 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, 1,000 ಚದರ ಮೀಟರ್‌ವರೆಗಿನ ವಿಸ್ತೀರ್ಣದ ನಿವೇಶನಗಳಿಗೆ “ಏಕ ನಿವೇಶನ” (Single Plot) ವಿನ್ಯಾಸದ ಯೋಜನೆಗೆ ಅನುಮೋದನೆ ನೀಡುವ ಅಧಿಕಾರವನ್ನು ಕೆಳಕಂಡ ಸ್ಥಳೀಯ ಅಧಿಕಾರಿಗಳಿಗೆ ವಿಕೇಂದ್ರೀಕರಿಸಲಾಗಿದೆ.

Advertisement

ಮಹಾನಗರ ಪಾಲಿಕೆಗಳ ವಲಯ ಆಯುಕ್ತರು, ನಗರ ಸಭೆಗಳ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು / ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಥವಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಅಧಿಕಾರಿಗಳು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮಹಂತಪ್ಪ ಎಸ್. ತುರಕನೂರ್ ಅವರು ಸಹಿ ಮಾಡಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ಸಣ್ಣ ನಿವೇಶನಗಳ ಲೇಔಟ್ ಪ್ಲಾನ್ ಅನುಮೋದನೆ ಪ್ರಕ್ರಿಯೆಯನ್ನು ಈ ಮೂಲಕ ಸರಳಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್ (25 ಸೆಂಟ್ಸ್)ವರೆಗಿನ ಏನ ನಿವೇಶನ (single plot/single Layout) ಲೇಔಟ್ ಪ್ಲಾನ್ ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ(pdo)ವಹಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಸಣ್ಣ ಪ್ರಮಾಣದ ನಿವೇಶನ ಹೊಂದಿರುವ ಗ್ರಾಮೀಣ ಭಾಗದ ಜನರು ತಮ್ಮ ಮನೆ ನಿರ್ಮಾಣಕ್ಕಾಗಿ ಲೇಔಟ್ ಅಥವಾ ನಿವೇಶನ ಸಂಬಂದಿತ ಅನುಮೋದನೆ ಪಡೆಯಲು ಈ ಹಿಂದೆ ವಿವಿಧ ಹಂತಗಳ ಕಚೇರಿಗಳಿಗೆ ತೆರಳಿ ಸಮಯ ಮತ್ತು ಹಣ ವ್ಯಯಿಸಬೇಕಾಗಿತ್ತು ಇದರಿಂದಾಗಿ ಸಾರ್ವಜನಿಕರಿಗೆ ಅನಗತ್ಯ ವಿಳಂಬ ಹಾಗೂ ತೊಂದರೆ ಉಂಟಾಗುತ್ತಿತ್ತು ಈ ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ಗ್ರಾಮೀಣ ಜನರಿಗೆ ಸ್ಥಳೀಯ ಮಟ್ಟದಲ್ಲೇ ತ್ವರಿತವಾಗಿ ಸೇವೆ ದೊರೆಯುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ವಿನಂತಿಸಲಾಗಿತ್ತು ಇದೀಗ ಸರ್ಕಾರವು ಈ ಮನವಿಗೆ ಸ್ಪಂದಿಸಿ 1000 ಚದರ ಮೀಟರ್ ವರೆಗಿನ ಏಕ ನಿವೇಶನ ಲೇಔಟ್ ಪ್ಲ್ಯಾನ್ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲೇ ಪಿಡಿಒಗಳಿಗೆ ನೀಡಿರುವುದು ಸ್ವಾಗತಾರ್ಹ ಮತ್ತು ಜನಪರ ಕ್ರಮವಾಗಿದೆ ಎಂದರು

ಇದರಿಂದಾಗಿ ಮಧ್ಯಮ ವರ್ಗದ ಕುಟುಂಬಗಳು ಹಾಗೂ ಗ್ರಾಮೀಣ ಭಾಗದ ಸಾಮನ್ಯ ನಾಗರೀಕರಿಗೆ ಈ ಕ್ರಮದಿಂದ ಹೆಚ್ಚಿನ ಪ್ರಯೋಜನವಾಗಲಿದೆ. ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೂಯ್ಯುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಲವು ಬಾರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಈ ರೀತಿಯ ಸರಳೀಕರಣ ಕ್ರಮ ಕೈಗೊಂಡಿರುವ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಗ್ರಾಮೀಣ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಜೊತೆಗೆ ಮರಳು ಮತ್ತು ಕೆಂಪು ಕಲ್ಲಿನ ಸಮಸ್ಯೆ ಶೀಘ್ರವಾಗಿ ಇತ್ಯರ್ಥವಾಗುವಂತೆ ಸರ್ಕಾರ ಶೀಘ್ರದಲ್ಲೇ ಜನರ ಬೇಡಿಕೆಯನ್ನು ಈಡೇರಿಸುವ ಅವಕಾಶವಿದೆ ಎಂದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page