ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಪ್ರಕರಣದ ಹಿಂದಿನ ತನಿಖೆ ನಡೆಸಿದ್ದ ಡಾಕ್ಟರ್, ಬೆಳ್ತಂಗಡಿ ಪೊಲೀಸ್, ಸಿಐಡಿ, ಸಿಐಬಿಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ತನಿಖಾ ತಂಡ (SIT) ಅ.23ರಂದು ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.
ಈವರೆಗೆ ಸುಮಾರು 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. 2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರಂಭಗೊಂಡಿದ್ದ ತನಿಖೆಯಿಂದ ಹಿಡಿದು, ಬಳಿಕ ಸಿಐಡಿ ಮತ್ತು ಸಿಐಬಿ ನಡೆಸಿದ ತನಿಖೆಗಳವರೆಗೆ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲು ಎಸ್ಐಟಿ ಮುಂದಾಗಿದೆ ಎಂದು ಜಾಲತಾಣ ಮೂಲಗಳು ತಿಳಿಸಿವೆ.













