ಮಂಗಳೂರಿನ ಎಂಆರ್‌ಪಿಎಲ್‌ ಭಾಗದಲ್ಲಿ ಭೀಕರ ಸ್ಪೋಟ!! ಹಲವು ಮನೆಗಳ ಸಹಿತ ಕಟ್ಟಡಗಳು ಕಂಪನ!!

ಮಂಗಳೂರು: ಎಂ.ಆರ್‌.ಪಿ.ಎಲ್ ಭಾಗದಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ಸ್ಪೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ.
ಸ್ಪೋಟದ ಭಾರೀ ಶಬ್ದದಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಪೋಟದ ಪರಿಣಾಮ ಹಲವು ಮನೆಗಳ ಬಾಗಿಲು, ಕಿಟಕಿಗಳು ಹಾಗೂ ಗಾಜುಗಳು ಉದುರಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವು ಕಟ್ಟಡಗಳ ಗೋಡೆಗಳಿಗೂ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜಪೆಯಲ್ಲಿ ಸ್ಪೋಟದ ತೀವ್ರತೆಗೆ ಕಂಪನದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.

Advertisement

ಸ್ಫೋಟ ಸಂಭವಿಸಿದ ಪ್ರದೇಶದ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ದೂರದಿಂದಲೂ ಹೊಗೆಯ ದೊಡ್ಡ ಪ್ರಮಾಣ ಗೋಚರಿಸುತ್ತಿದೆ. ಘಟನೆಯ ನಿಖರ ಕಾರಣ ಹಾಗೂ ಸ್ಪೋಟದ ತೀವ್ರತೆ ಕುರಿತು ಇನ್ನಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.
ಘಟನೆಯ ಬಳಿಕ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page