ಸೋನಿಯಾ ಗಾಂಧಿ ಇನ್ಸ್ಟಾಗ್ರಾಂಗೆ ಗ್ರ್ಯಾಂಡ್‌ ಎಂಟ್ರಿ! ವಿಡಿಯೋ ಹಂಚಿಕೊಂಡ ಕಾಂಗ್ರೆಸ್‌ ನಾಯಕಿ!!

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ಇನ್ಸ್ಟಾಗ್ರಾಮ್ ಖಾತೆ ತೆರೆಯುವ ಮೂಲಕ ಸಾಮಾಜಿಕ ಮಾಧ್ಯಮ ಲೋಕಕ್ಕೆ ಕಾಲಿಟ್ಟಿದ್ದಾರೆ. ಇದೇ ವೇಳೆ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಕುರಿತಾದ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ. ‘ಇದು ಪ್ರೀತಿ, ಕರ್ತವ್ಯ, ನಷ್ಟ ಮತ್ತು ಸೂಕ್ತವಾದ ಸ್ಥಾನವನ್ನು ಕಂಡುಕೊಳ್ಳುವ ಕಥೆ’ ಎಂದು ಬರೆದುಕೊಂಡಿದ್ದಾರೆ. ಸೋನಿಯಾಗಾಂಧಿ ಅವರು ಪುಸ್ತಕದ ಪ್ರತಿಗಳನ್ನು ಸ್ವೀಕರಿಸುತ್ತಿರುವುದು ಮತ್ತು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಸಿಹಿ ಹಂಚಿಕೊಳ್ಳುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ‘ಎಲ್ಲರಿಗೂ ನಮಸ್ಕಾರ, ಈ ಕ್ಷಣವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನನ್ನ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ನ ಮೊದಲ ನೋಟ ಇಲ್ಲಿದೆ’ ಎಂದು ಸೋನಿಯಾಗಾಂಧಿ ಮೊದಲ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Advertisement

‘ಇದು ಪ್ರೀತಿ, ಕರ್ತವ್ಯ, ನಷ್ಟ ಮತ್ತು ಸೂಕ್ತವಾದ ಸ್ಥಾನವನ್ನು ಕಂಡುಕೊಳ್ಳುವ ಕಥೆ. ಇದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. ಈ ಪುಸ್ತಕವು ನವೆಂಬರ್ 10ರಂದು ಬಿಡುಗಡೆಯಾಗಲಿದ್ದು, ಈಗಾಗಲೇ ಮುಂಗಡ ಬುಕಿಂಗ್‌ ಆರಂಭವಾಗಿದೆ. ಈ ಪುಸ್ತಕವನ್ನು ‘ಆಫ್ರಿಡ್ ಎ. ನಾಫ್’ ಸಂಸ್ಥೆ ಜಾಗತಿಕವಾಗಿ ಪ್ರಕಟಿಸುತ್ತಿದೆ. ಭಾರತದಲ್ಲಿ ‘ಹಾರ್ಪರ್ ಕಾಲಿನ್ಸ್ ಇಂಡಿಯಾ’ ಪ್ರಕಟಿಸಲಿದೆ.
‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕವು ಇಟಲಿಯಿಂದ ಬಂದು ನೆಹರು-ಗಾಂಧಿ ಕುಟುಂಬದ ಭಾಗವಾದ ಸೋನಿಯಾ ಗಾಂಧಿ ಅವರ ಜೀವನ ಕಥೆಯನ್ನು ಒಳಗೊಂಡಿದೆ. ಅತ್ತೆ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗಿನ ಒಡನಾಟ, ಭಾರತೀಯ ಜೀವನಶೈಲಿ ಹಾಗೂ ಸಂಸ್ಕೃತಿಗೆ ಹೊಂದಿಕೊಳ್ಳಲು ಸೋನಿಯಾ ನಡೆಸಿದ ಪ್ರಯತ್ನಗಳ ಬಗ್ಗೆ ವಿವರಿಸುತ್ತದೆ.

Advertisement
Advertisement

ಈ ಪುಸ್ತಕವು ಸೋನಿಯಾ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ ವೈಯಕ್ತಿಕ ದುರಂತಗಳ ಬಗ್ಗೆಯೂ ಬೆಳಕು ಚೆಲ್ಲುತ್ತದೆ. ಇದರಲ್ಲಿ 1980ರಲ್ಲಿ ವಿಮಾನ ದುರಂತದಲ್ಲಿ ಸಂಭವಿಸಿದ ಸಂಜಯ್ ಗಾಂಧಿ ಸಾವು, 1984ರಲ್ಲಿ ಇಂದಿರಾ ಗಾಂಧಿ ಅವರ ಹತ್ಯೆ ಮತ್ತು 1991ರಲ್ಲಿ ರಾಜೀವ್ ಗಾಂಧಿ ಅವರ ಹತ್ಯೆಯಂತಹ ಘಟನೆಗಳು ಸೇರಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page