ಧರ್ಮಸ್ಥಳ : 14 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕುಮಾರಿ ಸೌಜನ್ಯ ಅವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ.
ಅ.23ರಂದು ಸಂಜೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಮತ್ತು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಡಿಎನ್ಎ ಪರೀಕ್ಷೆ ನಡೆಸುವ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಕುಸುಮಾವತಿ ಅವರನ್ನು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ ಇದೀಗ ಸೌಜನ್ಯ ಪ್ರಕರಣದ ಮರು ತನಿಖೆಯನ್ನು ಚುರುಕುಗೊಳಿಸಿದ್ದು ಎಲ್ಲಾ ಆಯಾಮಗಳಲ್ಲಿಯೂ ವಿಚಾರಣೆ ನಡೆಸುತ್ತಿದೆ.














