ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದ್ದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.
ಅ.24ರಂದು ನಗರ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರ ಎದುರು ಅವರು ವಿಚಾರಣೆಗೆ ಹಾಜರಾಗಿದ್ದ ಅವರು, ಬಂಧನ ಭೀತಿಯಿಂದ ಆಕೆ ಅಮೆರಿಕಕ್ಕೆ ತೆರಳಿರಬಹುದು ಎಂಬ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಕೃಪಾ ಆಳ್ವಾಗೆ ನೋಟಿಸ್ ಜಾರಿ ಮಾಡುವ ಮೊದಲೇ, ಸ್ವಯಂ ಪ್ರೇರಿತವಾಗಿ ಪೊಲೀಸರ ಎದುರು ಹಾಜರಾಗಿ ಪ್ರಕರಣದ ಸಂಬಂಧ ಹೇಳಿಕೆ ದಾಖಲಿಸಿದ್ದರು. ವಿಚಾರಣೆಯ ಬಳಿಕ ಮುಂದಿನ ವಿಚಾರಣೆಗೆ ಹಾಜರಾಗಬೇಕು. ಬೇರೆ ಎಲ್ಲಿಯೂ ಹೋಗಬಾರದು ಎಂದು ಪೊಲೀಸರು ಅವರಿಗೆ ಸೂಚಿಸಿದ್ದರು. ಈ ನಡುವೆಯೂ ಅನುಮತಿಯಿಲ್ಲದೆ ಆಕೆ ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸರ ವಿಚಾರಣೆಯಲ್ಲಿ ಸ್ಟಿಂಗ್ ಕಾರ್ಯಾಚರಣೆಯಲ್ಲಿ ನಾನು ಭಾಗಿ ಆಗಿಲ್ಲ. ನನಗೂ ಪ್ರಕರಣಕ್ಕೂ ಸಂಬಂಧ ಇಲ್ಲ. ಮಾಧ್ಯಮ ಸಂಸ್ಥೆಯೊಂದರ ಮುಖ್ಯಸ್ಥ ರಾಕೇಶ್ ಶೆಟ್ಟಿ ಅನಿರೀಕ್ಷಿತವಾಗಿ ವಿಮಾನ ನಿಲ್ದಾಣದಲ್ಲಿ ಸಿಕ್ಕಾಗ ಮಾತನಾಡಿದ್ದ ಅಷ್ಟೇ ಎಂಬುದಾಗಿ ವಿಚಾರಣೆ ವೇಳೆ ಕೃಪಾ ಆಳ್ವಾ ಹೇಳಿಕೆ ನೀಡಿದ್ದರು ಎಂದು ತಿಳಿದು ಬಂದಿದೆ.















