ಗ್ಲಾಸ್‌ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ ಬಿದ್ದು ಸಾಮಾಜಿಕ ಕಾರ್ಯಕರ್ತ ಸುನೀಲ್‌ ಬೈಲಕೆರೆ ನಿಧನ! ನಿಟ್ಟೂರಿನ ಶ್ರೀದೇವಿ ಗ್ಲಾಸ್‌ ಫ್ಯಾಕ್ಟರಿಯಲ್ಲಿ ಘಟನೆ!

ಉಡುಪಿ: ನಿಟ್ಟೂರಿನ ಶ್ರೀದೇವಿ ಗ್ಲಾಸ್‌ ಫ್ಯಾಕ್ಟರಿಯಲ್ಲಿ ಅನ್‌ಲೋಡ್‌ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗಾಜಿನ ಬ್ಲಾಕ್‌ಗಳು ಬಿದ್ದು ಉಡುಪಿಯ ಖ್ಯಾತ ಸಾಮಾಜಿಕ ಕಾರ್ಯಕರ್ತ ಸುನೀಲ್‌ ಬೈಲಕೆರೆ (45) ಸೋಮವಾರ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಶಿರೂರು ಮಠದ ಪೂರ್ವಾಶ್ರಮದ ಶ್ರೀ ದಿ. ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅಪ್ತ ಹಾಗೂ ಕಾರು ಚಾಲಕನಾಗಿದ್ದ ಸುನೀಲ್‌ ಬೈಲಕೆರೆ, ಸಾರ್ವಜನಿಕರ ಹಾಗೂ ಶೋಷಿತರ ಪರ ಹಲವು ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವರದಿಯಾಗಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page