ಬಹುನಿರೀಕ್ಷಿತ ರಾಮಾಯಣ ಸಿನೆಮಾಕ್ಕೆ ಪಶ್ಚಿಮ ಬಂಗಾಳದಲ್ಲಿ ತೆರಿಗೆ ವಿನಾಯಿತಿ!! ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಣೆ!!

ಪಶ್ಚಿಮ ಬಂಗಾಳ: ಕೋಲ್ಕತ್ತದ ಸಾಲ್ಟ್ ಲೇಕ್ ಸೆಂಟ್ರಲ್ ಪಾರ್ಕ್‌ನಲ್ಲಿ ಅಕ್ಟೋಬರ್ 20ರಂದು ನಡೆದ ‘ರಾಮ್‌ಕಿ ಅಯೋಧ್ಯೆ’ ಎಂಬ ವಿಶೇಷ ದಸರಾ ಮಹೋತ್ಸವದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ಅವರು, ‘ರಾಮಾಯಣ’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಈ ಕುರಿತು ‘ಎಎನ್ಐ’ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ‘ರಾಜ್ಯದಲ್ಲಿ ರಾಮಾಯಣ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಈ ಹಿಂದೆ ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಲಾಗಿತ್ತು. ಅದೇ ಮಾದರಿಯಲ್ಲಿ ‘ರಾಮಾಯಣ’ ಸಿನಿಮಾಗೂ ತೆರಿಗೆ ವಿನಾಯಿತಿ ಇದೆ’ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಮಾಯಣ ಸಿನಿಮಾದ ನಟರಾದ ರಣಬೀರ್ ಕಪೂರ್ ಹಾಗೂ ಯಶ್ ಇದ್ದರು. ಭಾರತೀಯ ಪುರಾಣಗಳನ್ನು ಆಧರಿಸಿ ನಿರ್ಮಾಣವಾಗುವ ಸಿನಿಮಾಗಳ ಕುರಿತು ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಕೃಷ್ಣ ಹಾಗೂ ಅರ್ಜುನರನ್ನು ಒಳಗೊಂಡ ಮಹಾಭಾರತದ ಪ್ರಸಂಗ ಆಧರಿಸಿದ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲಿವೆ. ಇತ್ತೀಚೆಗೆ ಚೋರ್ಬಗನ್ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಮನಸ್ಸಿಗೆ ತೀವ್ರ ಬೇಸರ ತಂದಿದೆ. ದುಃಖಿತ ಕುಟುಂಬಗಳೊಂದಿಗೆ ನಾವಿದ್ದೇವೆ‘ ಎಂದು ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ರಾವಣನಾಗಿ ‘ರಾಕಿಂಗ್ ಸ್ಟಾರ್’ ಯಶ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ಲಕ್ಷ್ಮಣನ ಪಾತ್ರದಲ್ಲಿ ರವಿ ದುಬೆ ನಟಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ವಿವೇಕ್ ಒಬೆರಾಯ್, ಕುನಾಲ್ ಕಪೂರ್, ಆದಿನಾಥ್ ಕೊಠಾರೆ, ಅರುಣ್ ಗೋವಿಲ್, ಇಂದಿರಾ ಕೃಷ್ಣನ್ ಹಾಗೂ ಲಾರಾ ದತ್ತಾ ಅಭಿನಯಿಸಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page