ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ನಿಂದನೆ ಜೀವ ಬೆದರಿಕೆ! ಕಠಿನ ಕ್ರಮಕ್ಕೆ ರಮಿತಾ ಸೂರ್ಯವಂಶಿ ಆಗ್ರಹ!!

ಗ್ರಾಮೀಣ ಭಾಗದ ಮಹಿಳೆಯರಿಗೆ ಚಿಕಿತ್ಸೆ ಹಾಗೂ ಹೆರಿಗೆ ಸೇವೆ ನೀಡುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನೇ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಂದಿಸಿ, ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದು ಗಂಭೀರ ವಿಚಾರವಾಗಿದೆ. ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂತಹ ಘಟನೆಗಳಿಗೆ ಇಲಾಖೆ ನಿರ್ಲಕ್ಷ್ಯ ಮಾಡದೆ, ಆರೋಪಗಳು ಸಾಬೀತಾದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮಿತಾ ಸೂರ್ಯವಂಶಿ ಆಗ್ರಹಿಸಿದರು.
ಕಾರ್ಕಳ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು ಮೂರು ವರ್ಷಗಳಕಾಲ ಸ್ತ್ರೀರೋಗ ತಜ್ಞರ ಕೊರತೆಯಿತ್ತು. ಈ ವಿಚಾರ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರ ಗಮನಕ್ಕೆ ಬಂದ ಬಳಿಕ ಸ್ತ್ರೀರೋಗ ತಜ್ಞರನ್ನು ನೇಮಕ ಮಾಡಲಾಗಿದ್ದು, ಡಾ. ಸಾಹಿತ್ಯ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

Advertisement

ಡಾ. ಸಾಹಿತ್ಯ ಅವರ ಸೇವೆಯಿಂದ ಆಸ್ಪತ್ರೆಯ ಹೆರಿಗೆ ಸೇವೆಯಲ್ಲಿ ಸುಧಾರಣೆ ಕಂಡಿದ್ದು, ವೈದ್ಯಕೀಯವಾಗಿ ಸಧ್ಯವಿರುವ ಸಂದರ್ಭಗಳಲ್ಲಿ ಸಾಮಾನ್ಯ ಹೆರಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಜೆಯ ಸಂದರ್ಭದಲ್ಲಿಯೂ ಅಗತ್ಯವಿದ್ದಾಗ ಆಸ್ಪತೆಗೆ ಅಗಮಿಸಿ ಸೇವೆಸಲ್ಲಿಸಿರುವುದು ಅವರ ಕರ್ತವ್ಯ ಬದ್ಧತೆಯನ್ನು ತೋರಿಸುತ್ತದೆ. ಇತ್ತೀಚೆಗೆ ಆಸ್ಪತ್ರೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿರುವ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿದ ವಿಚಾರದಲ್ಲಿ ವೈದ್ಯರು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ವಿವಾದ ಉಂಟಾಗಿದೆ. ಈ ವೇಳೆ ವೈದ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ ಎಂದರು.
ಈ ಕುರಿತು ವೈದ್ಯರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ವೈದ್ಯರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅಡ್ಡಿಪಡಿಸುವುದು ಅಥಾವ ಬೆದರಿಕೆ ಹಾಕುವುದರಿಂದ ಸರ್ಕಾರಿ ಆಸ್ಪತ್ರೆಯ ಸೇವಾ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರುವ ಸಾದ್ಯತೆಯಿದೆ. ಇಂತಹ ಘಟನೆಗಳಿಂದ ವೈದ್ಯರು ಹಾಗೂ ಸಿಬ್ಬಂದಿಯಲ್ಲಿ ಅಸುರಕ್ಷಿತ ಭಾವನೆ ಮೂಡದಂತೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಮಿತಾ ಸೂರ್ಯವಂಶಿ ಹೇಳಿದರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page