ಮಧ್ಯರಾತ್ರಿ ಸುಮಾರಿಗೆ ಕಲ್ಮಡ್ಕದ ಬೊಮೆಟ್ಟಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಬ್ಬರು ಯುವಕರು ಈ ಅನಾಹುತದಲ್ಲಿ ಒಬ್ಬ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, ಮತ್ತೋರ್ವ ಬಾಲಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ವಿದ್ಯುತ್ ಆಘಾತದಿಂದ ಬೊಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂಬ ಯುವಕರು ದುರ್ಮರಣಕ್ಕೀಡಾಗಿದ್ದಾರೆ. ನಿನ್ನೆ ರಾತ್ರಿ ಬೊಮೆಟ್ಟಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ ಈ ಅಪಘಾತದಲ್ಲಿ ಮೃತರಲ್ಲದೆ ಮತ್ತೋರ್ವ ಬಾಲಕನಿಗೂ ಗಾಯಗಳಾಗಿದ್ದು, ಆತನಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ರಾತ್ರಿ ವೇಳೆ ಅನಿರೀಕ್ಷಿತವಾಗಿ ಸಂಭವಿಸಿದ ಈ ವಿದ್ಯುತ್ ಅವಘಾತದಿಂದ ಬೊಮೆಟ್ಟಿ ಗ್ರಾಮಸ್ಥರು ಶೋಕದಲ್ಲಿ ಮುಳುಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.














