ಮಂಗಳೂರು: ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ವರ್ತನೆ ಮುಂತಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿರುವ, ಕೆಲವು ದಿನಗಳ ಹಿಂದೆ ಉಪ್ಪಿನಂಗಡಿ ಗ್ರಾಮಾಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ (ಪಿಡಿಒ) ವಿಡ್ ಲಾರೆನ್ಸ್ ರೋಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ಹತ್ತಿರವು ಇವರ ಬಗ್ಗೆ ದೂರುಗಳು ಕೇಳಿಬಂದಿದ್ದವು. 20 ದಿನಗಳ ಹಿಂದೆಯಷ್ಟೇ ಅವರನ್ನು ಉಪ್ಪಿನಂಗಡಿಯಿಂದ ಆರ್ಯಾಪು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಳಿಸಲಾಗಿತ್ತು. ವರ್ಗಾವಣೆಗೊಂಡ ಬಳಿಕವು ವಿಲೈಡ್ ರೋಡ್ರಿಗಸ್ ಅವರು ಉಪ್ಪಿನಂಗಡಿ ಪಂಚಾಯತ್ ನ ಪ್ರಭಾರ PDO ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಸೆಪ್ಟೆಂಬರ್ 09 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡವು ಉಪ್ಪಿನಂಗಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭದಲ್ಲಿ ಪಿಡಿಒ ವಿಲೈಡ್ ಲಾರೆನ್ಸ್ ರೋಡ್ರಿಗಸ್ ಅವರು ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳಲ್ಲಿ ವಿಳಂಬ ಮಾಡಿದ್ದು, ಲಂಚದ ಬೇಡಿಕೆ ಇಟ್ಟಿರುವುದು ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈ ಕುರಿತು ಒಟ್ಟು 15ಕ್ಕೂ ಹೆಚ್ಚು ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಉಪ್ಪಿನಂಗಡಿ ಗ್ರಾ. ಪಂ. ಪಿ.ಡಿ.ಒ. ಆಗಿದ್ದ ವಿಡ್ ಲಾರೆನ್ಸ್ ಸಸ್ಪೆಂಡ್! ಅನುಚಿತ ವರ್ತನೆ ಸಹಿತ ಅನೇಕ ಆರೋಪಗಳು ಕೇಳಿ ಬಂದ ಹಿನ್ನಲೆ..
Share this article
Subscribe
By pressing the Subscribe button, you confirm that you have read our Privacy Policy.













