ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ! ಧರ್ಮಸ್ಥಳದಲ್ಲಿ ಹಬ್ಬದ ವಾತಾವರಣ!!

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಅಕ್ಟೋಬರ್ 24ರಂದು ಸಂಭ್ರಮದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಹೆಗ್ಗಡೆಯವರ ಬೀಡು, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ, ಅನ್ನಪೂರ್ಣ ಭೋಜನಾಲಯ ಹಾಗೂ ಅತಿಥಿಗೃಹಗಳನ್ನು ಆಕರ್ಷಕ ವಿದ್ಯುತ್ ದೀಪಗಳು ಮತ್ತು ನೈಸರ್ಗಿಕ ಪರಿಕರಗಳಿಂದ ಸಿಂಗರಿಸಲಾಗಿದೆ. ಕ್ಷೇತ್ರದ ಸೌಂದರ್ಯ ಹೆಚ್ಚಿಸಿರುವ ಅಲಂಕಾರ ಭಕ್ತರು ಮತ್ತು ಪ್ರವಾಸಿಗರ ಗಮನ ಸೆಳೆಯುತ್ತಿದೆ. ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಸೇರಿದಂತೆ ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ

Advertisement

ಅಕ್ಟೋಬರ್ 24ರಂದು ಅಪರಾಹ್ನ 4 ಗಂಟೆಯಿಂದ ನಡೆಯಲಿರುವ ಮುಖ್ಯ ಸಮಾರಂಭದಲ್ಲಿ ಹಿರಿಯ ನೌಕರರನ್ನು ಸನ್ಮಾನಿಸಲಾಗುತ್ತದೆ. ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸುವ ನಿರೀಕ್ಷೆಯೂ ಇದೆ. ಯೋಜನೆಗಳ ಕುರಿತು ಅಧಿಕೃತ ಘೋಷಣೆಯಾದ ಬಳಿಕವೇ ಅವುಗಳ ಸ್ವರೂಪ ಮತ್ತು ಪ್ರಯೋಜನಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page