ದಕ್ಷಿಣ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ್‌! ಭಾರೀ ಮಳೆಯಾಗುವ ಸೂಚನೆ!!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲಿನೊಂದಿಗೆ ಮಳೆ ಬೀಳಲಿದ್ದು, ಉತ್ತರ ಕನ್ನಡದಲ್ಲಿಯೂ ಉತ್ತಮ ಮಳೆಯಾಗಲಿದೆ. ಇನ್ನು ಮಲೆನಾಡು ಭಾಗಗಳಾದ ಶಿವಮೊಗ್ಗ, ಚಾಮರಾಜನಗರ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Advertisement
Advertisement

ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆಯೇ ಮುಂದುವರಿಯಲಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page